weather forecast in karnataka 
ನ್ಯೂಸ್

ಮುಂದುವರೆಯಲಿದೆ ಮಳೆಯ ಸಿಂಚನ; ಇಲ್ಲಿದೆ ಹವಾಮಾನ ಇಲಾಖೆ ವರದಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ(Silicon City) ಮೋಡಿ ಕವಿದ ವಾತಾವರಣ ಮುಂದುವರೆದಿದ್ದು, ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(Weather Forecast) ವರದಿ ನೀಡಿದೆ.

ಸದ್ಯ ಮಲೆನಾಡಿನಂತೆ ಕಂಗೊಳಿಸುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಮಳೆ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ ಎಂದು ಸೂಚನೆ ನೀಡಲಾಗಿದ್ದು, ದುರ್ಬಲಗೊಂಡಿದ್ದ ಮಾನ್ಸೂನ್ ಇಂದಿನಿಂದ ಮತ್ತಷ್ಟು ಚುರುಕುಗೊಳ್ಳಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಮಂಗಳವಾರ ರಾಜ್ಯದ ಹಲವೆಡೆ ಮಳೆಯಾಗಿದ್ದು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು,ಮಂಡ್ಯ, ರಾಮನಗರ, ಕೊಡಗು, ಹಾಸನ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಗುಡುಗು-ಮಿಂಚು ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.