Weather update 20-09-202: ಕಳೆದ 2 ದಿನಗಳಿಂದ ಮೋಡ ಕವಿದ ವಾತಾವರಣ ಮತ್ತು ಅನೇಕ ಸ್ಥಳಗಳಲ್ಲಿ ಮಧ್ಯಂತರ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಂಪಿನ ವಾತಾವರಣವಿದೆ.
ಮುಂದಿನ ಕೆಲವು ದಿನಗಳ ಕಾಲ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇನ್ನು ಇಲಾಖೆಯ ಪ್ರಕಾರ, ದೆಹಲಿ-ಎನ್‌ಸಿಆರ್‌ನಲ್ಲಿ ಸೆಪ್ಟೆಂಬರ್ 21 ರಂದು ಅಂದರೆ ಗುರುವಾರ ಮತ್ತೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 21 ಮತ್ತು 22 ರಂದು ದೆಹಲಿ-ಎನ್‌ಸಿಆರ್’ನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್’ನಷ್ಟು ಕಡಿಮೆಯಾಗಬಹುದು. ಆದರೆ, ಮರುದಿನದಿಂದ ಅಂದರೆ ಸೆಪ್ಟೆಂಬರ್ 23ರಿಂದ ಮತ್ತೆ ವಾತಾವರಣ ಶುಷ್ಕವಾಗಲಿದ್ದು, ಜನರು ತೀವ್ರ ಬಿಸಿಲಿನಿಂದ ಬಳಲುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಹೀಗಿರಲಿದೆ ಹವಾಮಾನ: ಕರ್ನಾಟಕದಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.