ನ್ಯೂಸ್

Weather Update| ಮುಂದಿನ ಕೆಲ ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​

ಬೆಂಗಳೂರು: ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್​ 08ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Update) ನೀಡಿದೆ.

ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮನಾ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.