ಕೋಲ್ಕತ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ 294 ಸ್ಥಾನಗಳ ಮತಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಯ ಏಜೆಂಟ್ ಒಬ್ಬರು ಮತಎಣಿಕೆ ಕೇಂದ್ರದಲ್ಲೇ ಪ್ರಜ್ಞೆ ತಪ್ಪಿಬಿದ್ದಿರುವುದು ಆತಂಕಕ್ಕೆ ಕಾರಣವಾಗಿದೆ.
ಉತ್ತರ 24 ಪರಗಣ ಜಿಲ್ಲೆಯ ಪನಿಹಟಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಾಪಸ್ ಮಜುಮ್ದರ್ ಅವರ ಏಜೆಂಟ್ ಗೋಪಾಲ್ ಸೋಮ್ ಅವರು ಮತಎಣಿಕೆ ನಡುವೆಯೇ ಪ್ರಜ್ಞೆ ಕಳೆದುಕೊಂಡು ಕುಸಿದುಬಿದ್ದರು. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಸಹಾಯದ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು.
ಸದ್ಯದ ಟ್ರೆಂಡ್ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಟಿಎಂಸಿ 21 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದಲ್ಲಿ ಹಾಲಿ ಸಿಎಂ ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆ ಆಗಿದ್ದು, ಎದುರಾಳಿ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.