ನ್ಯೂಸ್

ರಾಹುಲ್, ಸೋನಿಯಾ ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ?

ಬೆಂಗಳೂರು:  ಆರ್‌ಎಸ್‌ಎಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಬಗ್ಗೆ ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿದ್ದಾರೆ. ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಮಂದಿರ ನಿರ್ಮಾಣ ಎಂದರೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಎಂದು ವಿಧಾನ ಸಭೆ ವಿರೋಧ ಪಕ್ಷದ ಅಶೋಕ ಹೇಳಿದರು.
ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ? ಇಂದಿರಾಗಾಂಧಿ ತಂದ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟವೇ ಒಂದು ಸ್ವಾತಂತ್ರ್ಯ ಸಂಗ್ರಾಮ. ಆ ಸಂಗ್ರಾಮದಲ್ಲಿ ಜನಸಂಘದ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ನವರು ಯಾವ ಹೋರಾಟ ಮಾಡಿದ್ದಾರೆ ಎಂದು ತಿಳಿಸಲಿ. ಇಂದಿರಾಗಾಂಧಿಯನ್ನೇ ವಿರೋಧಿಸಿ ಹೋರಾಟ ಮಾಡಿದ ಆರ್‌ಎಸ್‌ಎಸ್, ರಾಹುಲ್ ಗಾಂಧಿಗೆ ಹೆದರುವುದಿಲ್ಲ ಎಂದರು.