ನ್ಯೂಸ್

ಕೆಲವರು ಹೇಳಿದ್ದೆಲ್ಲ ಸತ್ಯವಲ್ಲ; ಗೃಹ ಸಚಿವರ ಸ್ಪಷ್ಟನೆ

ಬೆಂಗಳೂರು: ಮೂಡಾ ಅಕ್ರಮದ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ, ಸಾಕ್ಷ್ಯಗಳನ್ನು ನಾಶ ಮಾಡುತ್ತಾರೆ ಎಂಬ ಕಾರಣದಿಂದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತದೆ. ಆರೋಪಗಳು ಕೇಳಿ ಬಂದಾಗ ನಡೆಯುವ ಸಾಮಾನ್ಯ ಪ್ರಕ್ರಿಯೆ ಇದು. ಮುಂದೆ ಇಲಾಖಾ ವಿಚಾರಣೆಯಲ್ಲಿ ಅಕ್ರಮ ನಡೆದಿರುವುದು ಕಂಡು ಬಂದರೆ, ಪೊಲೀಸ್ ತನಿಖೆಗೆ ವಹಿಸುವ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಎಚ್.ವಿಶ್ವನಾಥ್ ಆರೋಪಕ್ಕೆ ಪ್ರತಿಕ್ರಿಯಿಸಿ, ಕೆಲವರು ಹೇಳಿದ್ದೆಲ್ಲವು ಸತ್ಯವಲ್ಲ. ತನಿಖೆ ಮಾಡಿ, ಸತ್ಯಾಂಶಗಳು ಬೆಳಕಿಗೆ ಬಂದ ನಂತರ ಯೋಚಿಸೋಣ ಎಂದರು.