ಬೆಂಗಳೂರಿನ ಆರ್​.ವಿ. ಟೀಚರ್ಸ್​ ಕಾಲೇಜಿನಲ್ಲಿ ನಡೆದ ಎಸ್ಎಸ್ಎಲ್​ಸಿ ಪರೀಕ್ಷೆಯ ದೃಶ್ಯ. 
ನ್ಯೂಸ್

ಎಸ್​ಎಸ್​ಎಲ್​ಸಿ ಫಲಿತಾಂಶ ಯಾವತ್ತು?; ಇಲ್ಲಿದೆ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ರಿಸಲ್ಟ್​ ಕುರಿತ ಮಾಹಿತಿ..

Webdesk - Ravikanth

ಬೆಂಗಳೂರು: ಬಹು ನಿರೀಕ್ಷಿತ 2021ರ ಎಸ್​ಎಸ್​​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಕುರಿತು ಈಗಾಗಲೇ ಬಹುತೇಕ ಒಂದು ನಿರ್ಧಾರ ತಳೆಯಲಾಗಿದೆ. ಫಲಿತಾಂಶವನ್ನು ಆಗಸ್ಟ್ 10ರೊಳಗೆ ಪ್ರಕಟಿಸುವುದಾಗಿ ಈ ಹಿಂದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ಎಸ್.ಸುರೇಶ್ ಕುಮಾರ್ ಹೇಳಿದ್ದರು. ಆದರೆ, ಇದೀಗ ಸಚಿವ ಸಂಪುಟ ಬದಲಾಗಿದ್ದು, ಸಚಿವರ ನೇಮಕವಾಗಬೇಕಿದೆ.

ಈ ಮಧ್ಯೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಮಂಡಳಿ ಸದಸ್ಯರ ಸಭೆ ನಡೆಸಿದ್ದು, ಈ ಸಭೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ. ಈ ಸಭೆಯ ನಡಾವಳಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಿಕೊಟ್ಟಿದ್ದು, ಅವರಿಂದ ಅನುಮತಿಗಾಗಿ ಮಂಡಳಿಯು ಕಾಯುತ್ತಿದ್ದು, ಬಹುಶಃ ಒಂದೆರಡು ದಿನಗಳಲ್ಲಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಲಿದೆ.

ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕೇವಲ ಎರಡು ದಿನಗಳಲ್ಲೇ ಮುಗಿಸಲಾಗಿತ್ತು. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಪಾಸ್ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ಪಡೆಯಲಿದ್ದಾರೆ.