ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಯಾವಾಗ ಬಿಡುಗಡೆ ಆಗುತ್ತೆ? ಡಿಕೆಶಿ ಹೇಳೋದೇನು?

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮುಂತಾದವರು ಕೆಲವು ದಿನಗಳಿಂದ ಹೇಳುತ್ತಲೇ ಇದ್ದಾರೆ.

ಯುಗಾದಿ ಹಬ್ಬದ ದಿನ ಬಿಡುಗಡೆ ಆಗುತ್ತದೆ ಎಂಬುದಾಗಿ ನಿನ್ನೆಯವರೆಗೂ ಸುದ್ದಿ ಇತ್ತು. ಇಂದು ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಅವರು ಅದರ ಬಗ್ಗೆ ಸ್ಪಷ್ಟತೆ ನೀಡಿದರು.

‘‘ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಪ್ರಕಟಿಸುವ ಉದ್ದೇಶವಿತ್ತು. ಆದರೆ ಯುಗಾದಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಇವತ್ತು ಮಾಡಿಲ್ಲ. ನಾಳೆ ಅಥವಾ ನಾಡಿದ್ದು ಪ್ರಕಟಿಸುತ್ತೇವೆ’’ ಎಂದು ತಿಳಿಸಿದರು.