ಬೆಂಗಳೂರು: ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ನಲ್ಲಿ ಮಾತನಾಡಿ, ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ" ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.
ಇದನ್ನೂ ಓದಿ:15 ತಿಂಗಳ ಪುಟ್ಟ ಕಂದಮ್ಮನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಡೇ ಕೇರ್ ಸಿಬ್ಬಂದಿ! ವಿಡಿಯೋ ವೈರಲ್..Day Care
ನಗರದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದರು.ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ ಎಂದರು.
"ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ" ಎಂದರು.
ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, "ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ" ಎಂದು ಖಡಕ್ಕಾಗಿ ಉತ್ತರಿಸಿದರು.