ಬಂಡೀಪುರದಲ್ಲಿ ತಮಿಳುನಾಡು ಸಚಿವರ ಹುಚ್ಚಾಟ? 
ನ್ಯೂಸ್

ಬಂಡೀಪುರದಲ್ಲಿ ಹುಲಿ ಬೆನ್ನಟ್ಟಿದ್ದ ತಮಿಳುನಾಡು ಸಚಿವ ವನ್ನಿ? ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್ | Bandipur

Bandipur: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಮಿಳುನಾಡು ಸಚಿವ ವನ್ನಿ ಅರಸು ಅರಣ್ಯ ನಿಯಮಗಳನ್ನು ಉಲ್ಲಂಘಿಸಿ ಕಾಡಾನೆಯ ಹತ್ತಿರ ಹೋಗಿ, ಹುಲಿಯನ್ನು ಚೇಸ್ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಕರ್ನಾಟಕ ಸರ್ಕಾರ, ತನಿಖೆಗೆ ಆದೇಶಿಸಿದೆ.

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೋ, ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ವನ್ಯಜೀವಿ ಸಂರಕ್ಷಣಾ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ತೀವ್ರ ಕಳವಳ ಮೂಡಿಸಿದೆ.

ಈ ಘಟನೆಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, "ವೈರಲ್ ಆಗಿರುವ ದೃಶ್ಯಾವಳಿಯಲ್ಲಿ ವಾಹನದ ನೋಂದಣಿ ಸಂಖ್ಯೆ (Registration number) ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ತಿಳಿಸಿದ್ದಾರೆ.

‘ಯಾವುದೇ ವ್ಯಕ್ತಿ ಎಷ್ಟೇ ದೊಡ್ಡ ಹುದ್ದೆ ಅಥವಾ ಸ್ಥಾನಮಾನದಲ್ಲಿದ್ದರೂ ಅರಣ್ಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ಎಂದು ಸಚಿವರು ಖಡಕ್ ಆಗಿ ಹೇಳಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸದ್ಯ ಈ ವಿಡಿಯೋವನ್ನು ಪರಿಶೀಲಿಸುತ್ತಿದ್ದು, ಅರಣ್ಯ ಅಥವಾ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ನಿಯಮಗಳು ಉಲ್ಲಂಘನೆಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲೇ ತನ್ನ ಬೈಕ್‌ಗೆ ಬೆಂಕಿ ಹಚ್ಚಿ ಮಲಗಿದ ಭೂಪ: ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಕಂಗಾಲು..! Lies On Road

ಇನ್ನು, ತನಿಖಾ ವರದಿ ಬಂದ ನಂತರ ಮುಂದಿನ ಕಾನೂನು ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ, ಅಭಯಾರಣ್ಯ ಹಾಗೂ ಸಂರಕ್ಷಿತ ಪ್ರದೇಶಗಳಲ್ಲಿ ವನ್ಯಜೀವಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಪ್ರವಾಸಿಗರ ಜವಾಬ್ದಾರಿ ಎಷ್ಟು ಮುಖ್ಯ ಎಂಬುದನ್ನು ಈ ಪ್ರಕರಣ ಎತ್ತಿ ತೋರಿಸಿದೆ.