ನ್ಯೂಸ್

ಪತಿಯ ಶವದ ಮುಂದೆ ಅಳುತ್ತಲೇ ಪ್ರಾಣಬಿಟ್ಟ ಪತ್ನಿ: ಮಕ್ಕಳಿಬ್ಬರು ಅನಾಥ, ಹಾಸನದಲ್ಲಿ ಹೃದಯವಿದ್ರಾವಕ ಘಟನೆ

ಹಾಸನ: ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು (ಮೇ.6) ನಡೆದಿದೆ.

ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್​ ಹೃದಯಾಘಾತದಿಂದ ಮೃತಪಟ್ಟಿದ್ದ. ಇಂದು ಬೆಳಗ್ಗೆ ಪತಿಯ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ.

ಒಂದೆ ದಂಪತಿ ಸಾವಿನಲ್ಲೂ ಒಂದಾದರೆ, ಇನ್ನೊಂದೆಡೆ ದಂಪತಿ ಇಬ್ಬರು ಗಂಡು ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪಾಲಕರ ಶವಗಳ ಮುಂದೆ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ. ದಂಪತಿ ಸಾವಿಗೆ ಗ್ರಾಮಸ್ಥರು ಕೂಡ ಕಂಬನಿ ಮಿಡಿದಿದ್ದಾರೆ.

ಬೇಲೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದಂಪತಿಯ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. (ದಿಗ್ವಿಜಯ ನ್ಯೂಸ್​)