ಬಳ್ಳಾರಿ: ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ್ ಅವರನ್ನು ಭೇಟಿಯಾಗಲು 2ನೇ ಬಾರಿ ಅವರ ಪತ್ನಿ ಇಂದು (ಸೆ.5ರಂದು) ಆಗಮಿಸಿದ್ದಾರೆ. ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಇಲ್ಲಿಗೆ ಕರೆತರಲಾಗಿತ್ತು.
ಪೊಲೀಸರಿಂದ ಚಾರ್ಜ್‌ಶೀಟ್ ಸಲ್ಲಿಕೆಯ ಬಳಿಕ ದರ್ಶನ್ ಭೇಟಿಗೆ ದಿನಕರ್ ತೂಗುದೀಪ್ ಜೊತೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಕಾರಾಗೃಹದ ಹೈಸೆಕ್ಯೂರಿಟಿ ಸೆಲ್‌ನಿಂದ ಹೊರಬಂದ ಆರೋಪಿ ದರ್ಶನ್ ಪತ್ನಿ ಮತ್ತು ಸಹೋದರನನ್ನು ನೋಡಿ ಭಾವುಕರಾಗಿದ್ದಾರೆ.
ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರನ್ನ ಭೇಟಿಯಾಗಲು ತೆರಳಿದ ವಿಜಯಲಕ್ಷ್ಮಿ ಅವರು ಕೆಲವು ಪೇಪರ್ಗಳನ್ನು ಹಿಡಿದುಕೊಂಡು ಬಂದಿದ್ದಾರೆ. ಈ ವೇಳೆ ಅವರು ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಸುಮಾರು 25 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಕೆಲವು ಅಗತ್ಯ ವಸ್ತುಗಳನ್ನು ಅವರು ದರ್ಶನ್ಗೆ ನೀಡಿದ್ದಾರೆ.