ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿ ಬಿಜೆಪಿ ಸೇರಿ ಮಂತ್ರಿಗಳಾದವರ ಪೈಕಿ ಕೆಲವರು ಕಾಂಗ್ರೆಸ್ ಕದ ತಟ್ಟುತ್ತಿರುವುದು ಗುಟ್ಟಾಗಿ ಉಳಿದಿಲ್ಲ.
ಈ ನಡುವೆ ಕೆಪಿಸಿಸಿ ಅಧ್ಯಕ್ಷರು ಈ ಬೆಳವಣಿಗೆ ಸುದ್ದಿಗಾರರಿಗೆ ಸೂಕ್ಷ್ಮವಾಗಿ ಹೇಳಿದ್ದಾರೆ. ನಾನು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕು, ಮತ ಪ್ರಮಾಣ ಹೆಚ್ಚಿಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಚಿಂತನೆ ಇದೆಯಾ ಎಂಬ ಪತ್ರಕರ್ತರ ನೇರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಈ ವಿಚಾರವಾಗಿ ಯಾರ ಜತೆಯೂ ಮಾತನಾಡಿಲ್ಲ. ರಾಜಕೀಯದಲ್ಲಿ ಯಾರೂ ಯಾವ ನಿರ್ಧಾರ ಕೈಗೊಳ್ಳುತ್ತಾರೋ ಗೊತ್ತಿಲ್ಲ. ಅವರವರ ಭವಿಷ್ಯದ ಬಗ್ಗೆ ಆಲೋಚಿಸಿ ಅವರು ತೀರ್ಮಾನ ಮಾಡುತ್ತಾರೆ. ನನ್ನ ಜತೆ ಯಾರೂ ಯಾವ ಚರ್ಚೆಯನ್ನು ಮಾಡಿಲ್ಲ ಎಂದರು.