ಮಹಿಳೆ ಮತ್ತು ಅಪ್ರಾಪ್ತ ಬಾಲಕಿಗೆ ಹಲ್ಲೆ ನಡೆಸಿದ ವೀಡಿಯೊ ವೈರಲ್ 
ನ್ಯೂಸ್

ರಸ್ತೆಯಲ್ಲೇ ಮಹಿಳೆ, ಬಾಲಕಿಯನ್ನು ಅಟ್ಟಾಡಿಸಿ ಹಲ್ಲೆ; ಬೆಚ್ಚಿಬೀಳಿಸುವ ದೃಶ್ಯ ವೈರಲ್! | UP Viral Video

UP Viral Video: ಉತ್ತರ ಪ್ರದೇಶದಲ್ಲಿ ಮಹಿಳೆ ಮತ್ತು ಅಪ್ರಾಪ್ತ ಬಾಲಕಿಯ ಮೇಲೆ ರಸ್ತೆಯಲ್ಲೇ ಹಲ್ಲೆ ನಡೆಸಿರುವ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಮಹಿಳೆ ಹಾಗೂ ಬಾಲಕಿಯನ್ನು ಅಟ್ಟಾಡಿಸಿ ಹೊಡೆಯುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಲಾಲ್‌ಗಂಜ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಪೂರೆ ಅಜ್ಬಿ ಮಜ್ರೆ ಐಹಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನವೆಂಬರ್ 23ರಂದು ವೈರಲ್ ವೀಡಿಯೊ ಗಮನಕ್ಕೆ ಬಂದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲ್ಲೆಗೆ ಅಸಲಿ ಕಾರಣವೇನು?

ಸಾಮಾಜಿಕ ಜಾಲತಾಣಗಳಲ್ಲಿ ಕಿರುಕುಳ ನೀಡಿದ್ದನ್ನು ವಿರೋಧಿಸಿದ್ದಕ್ಕೆ ಮಹಿಳೆ ಮತ್ತು ಅಪ್ರಾಪ್ತ ಬಾಲಕಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಮೂಲಗಳ ಪ್ರಕಾರ, ಭೂವಿವಾದದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಹಲ್ಲೆ ನಡೆಸಿದವರಲ್ಲಿ ಮಹಿಳೆಯರೂ ಸೇರಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಒದಿ: Year Ender 2026: ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ 6 ಸಿನಿಮಾಗಳು; ಸ್ಟಾರ್ ನಟರ ಚಿತ್ರಗಳಿಗೂ ಸಿಗಲಿಲ್ಲ ಗೆಲುವು!

ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು

ಘಟನೆಯ ವೀಡಿಯೊ ವೈರಲ್ ಆದ ಬೆನ್ನಲ್ಲೇ ಲಾಲ್‌ಗಂಜ್ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.