ಮಲೆಮಹದೇಶ್ವರ ಬೆಟ್ಟದ ಮನೆಯೊಂದರಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಅಬಕಾರಿ ಪೊಲೀಸರು ಬಂಧಿಸಿದರು. ಸಿದ್ದಯ್ಯ, ರಮೇಶ್ ಇತರರು ಇದ್ದರು. 
ನ್ಯೂಸ್

ಮನೆಯಲ್ಲಿ ಮದ್ಯ ಮಾರುತ್ತಿದ್ದ ಮಹಿಳೆ ಬಂಧನ

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮನೆಯೊಂದರಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಮ.ಬೆಟ್ಟದ ಜ್ಯೋತಿ ಬಂಧಿತ ಆರೋಪಿ. ಈಕೆ ಮನೆಯಲ್ಲಿಯೇ ಸಾರ್ವಜನಿಕರಿಗೆ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಂಜೆ 4.15ರಲ್ಲಿ ಗಸ್ತಿನಲ್ಲಿದ್ದ ಕೊಳ್ಳೇಗಾಲ ಅಬಕಾರಿ ಉಪ ನಿರೀಕ್ಷಕ ಸಿದ್ದಯ್ಯ ಅವರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಬ್ಬಂದಿಯೊಂದಿಗೆ ಮನೆಯ ಮೇಲೆ ದಾಳಿ ನಡೆಸಿದಾಗ 90 ಮಿ.ಲೀ.ನ 30 ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆದರು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಯಿತು. ಈ ಸಂಬಂಧ ಕೊಳ್ಳೇಗಾಲ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.