ನ್ಯೂಸ್

ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡುತ್ತಿದ್ದಾಗ ಕುಸಿದು ಬಿದ್ದು 20 ವರ್ಷದ ಯುವತಿ ಸಾವು! heart attack

heart attack :  ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಲೇ ಮಹಾರಾಷ್ಟ್ರದ ಧಾರಾಶಿವ್​ನ ಕಾಲೇಜೊಂದರ  ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ವರ್ಷಾ ಮೃತ ವಿದ್ಯಾರ್ಥಿನಿ. ಈಕೆ ಖರತ್ ಪರಂಡದ ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭದಂದು ಸಂತೋಷದಿಂದ ಭಾಷಣ ಮಾಡುತ್ತಿದ್ದಳು.  ಭಾಷಣ ಮಾಡುತ್ತಿದ್ದಾಗ ಅವರಿಗೆ ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ  ಎನ್ನಲಾಗಿದೆ.
< /div>
ವಿಡಿಯೋದಲ್ಲಿ ಏನಿದೆ?: 
ಬೀಳ್ಕೊಡುಗೆ ಸಮಾರಂಭದಂದು ಸಂತೋಷದಿಂದ ಭಾಷಣ ಮಾಡುತ್ತಿದ್ದಳು.  ವರ್ಷಾ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದ ಕಾರಣ ಅವರನ್ನು ಪರಾಂಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.
ವರ್ಷಾ 8 ವರ್ಷದವಳಿದ್ದಾಗ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೆ ಕಳೆದ ಹನ್ನೆರಡು ವರ್ಷಗಳಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಿರಲಿಲ್ಲ ಮತ್ತು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ. ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.