ನ್ಯೂಸ್

'ನನ್ನನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಾನು ಆ*ತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಕೈಯಲ್ಲಿ ಬರೆದು ಪ್ರಾಣ ಬಿಟ್ಟ ವೈದ್ಯೆ.. doctor

ಮಹಾರಾಷ್ಟ್ರ:  ಸತಾರಾದ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮಹಿಳಾ ವೈದ್ಯೆಯೊಬ್ಬರು ( doctor)  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ಟನ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಫಾಲ್ಟನ್ ಉಪಜಿಲ್ಲೆಯ ಆಸ್ಪತ್ರೆಯಲ್ಲಿ ನಿಯೋಜಿತರಾಗಿದ್ದ ಮಹಿಳಾ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಮೃತ ಮಹಿಳಾ ವೈದ್ಯೆಯ ಕೈಯಲ್ಲಿ ಪೆನ್ನಿನಿಂದ ಬರೆದ ಆತ್ಮಹತ್ಯಾ ಪತ್ರ ಪತ್ತೆಯಾಗಿದೆ. ಪೊಲೀಸ್ ತಂಡ ಈ ಬಗ್ಗೆ ತನಿಖೆ ಆರಂಭಿಸಿದೆ.

ಸಂಪದ ಮುಂಡೆ ಎಂದು ಗುರುತಿಸಲ್ಪಟ್ಟ ವೈದ್ಯರು ಮತ್ತು ಜಿಲ್ಲಾ ಪೊಲೀಸರ ನಡುವೆ ವೈದ್ಯಕೀಯ ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಮಧ್ಯೆ ಇದು ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.  ಎರಡೂ ಕಡೆಯವರು ಈ ಹಿಂದೆ ವಾಗ್ವಾದ ನಡೆಸಿದ್ದರು, ನಂತರ ವೈದ್ಯರ ವಿರುದ್ಧ ಇಲಾಖಾ ವಿಚಾರಣೆಯನ್ನೂ ಆರಂಭಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಡಾ. ಮುಂಡೆ ತಮ್ಮ ಹಿರಿಯ ಅಧಿಕಾರಿಯನ್ನು ಸಂಪರ್ಕಿಸಿ, ತಮ್ಮ ಮೇಲೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೊಂಡಿದ್ದರು ಮತ್ತು ಈ ದೌರ್ಜನ್ಯ ನಿಲ್ಲಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಎಂದು ಮೂಲಗಳು ತಿಳಿಸಿವೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ಡಾ. ಮುಂಡೆ ಕಳೆದ ಕೆಲವು ತಿಂಗಳುಗಳಿಂದ ಪೊಲೀಸರು ಮತ್ತು ಆರೋಗ್ಯ ಇಲಾಖೆಯ ನಡುವಿನ ವಿವಾದದಲ್ಲಿ ಸಿಲುಕಿದ್ದರು. ಕೈಯಲ್ಲಿ ಆತ್ಮಹತ್ಯೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾ. ಮುಂಡೆ ಅವರು ತಮ್ಮ ಮೇಲಧಿಕಾರಿಗಳಿಗೆ ಬರೆದ ಲಿಖಿತ ದೂರಿನಲ್ಲಿ, "ನನ್ನನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಮತ್ತು ಇದೇ ಪರಿಸ್ಥಿತಿ ಮುಂದುವರಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.

ದುರದೃಷ್ಟವಶಾತ್, ನಿನ್ನೆ ರಾತ್ರಿ, ಮಹಿಳಾ ವೈದ್ಯೆ ಸಂಪದಾ ಮುಂಡೆ ಈ ಕಠಿಣ ಕ್ರಮ ಕೈಗೊಂಡರು. ಮೃತ ವೈದ್ಯರು ಕೈಬರಹದ ಆತ್ಮಹತ್ಯೆ ಪತ್ರವನ್ನು ಬರೆದು ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪೊಲೀಸರು ಪ್ರಸ್ತುತ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.