ಬೆಳಗಾವಿ: ಮಹಿಳೆಗೆ ಕಿರುಕುಳ ನೀಡಿದ್ದಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಜೀವವೇ ಬಲಿಯಾದ ಘಟನೆ ಕಿತ್ತೂರು ಬಸರಖೋಡ ಗ್ರಾಮದಲ್ಲಿ ನಡೆದಿದೆ.
ಬಸರಖೋಡ ಗ್ರಾಮದ ಬಸವರಾಜ್ ದೊಡಮನಿ ಮೃತ. ಈ ದೇಗಾಂವ ಗ್ರಾಮ ಪಂಚಾಯಿತಿ ಸದಸ್ಯ. ಮಧ್ಯರಾತ್ರಿ ಮಹಿಳೆಯ ಮನೆಗೆ ಹೋಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಆತನ ಕಣ್ಣಿಗೆ ಖಾರದ ಪುಡಿ ಎರಚಿ, ಹೊಡೆದಿದ್ದರು. ಹೀಗೆ ಹಲವು ಮಹಿಳೆಯರಿಗೆ ಆತ ಕಿರುಕುಳ ನೀಡಿದ್ದ ಎನ್ನಲಾಗಿದೆ.
ಗಾಯಗೊಂಡಿದ್ದ ಬಸವರಾಜ ದೊಡಮನಿಯನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)