ಉತ್ತರಪ್ರದೇಶ: ರಸ್ತೆಯಲ್ಲಿ ಹೋಗುವ ಹುಡುಗಿಗೆ ಚುಡಾಯಿಸಿದ ಎಂದು ರೊಚ್ಚಿಗೆದ್ದ ಮಹಿಳೆಯೊಬ್ಬಳು ಅಪ್ರಾಪ್ತ ಬಾಲಕನಿಗೆ ನಡುರಸ್ತೆಯಲ್ಲೇ ಚಪ್ಪಲಿಯಲ್ಲಿ ಮನಬಂದಂತೆ ಥಳಿಸಿದ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ವರದಿಯಾಗಿದೆ.
ಇದನ್ನೂ ಓದಿ: ಆಲೂಗಡ್ಡೆಯ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಯಾಕೆ..? ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ..!
ಬುಲಂದ್‌ಶಹರ್‌ನ ಕಿಕ್ಕಿರಿದ ಮಾರುಕಟ್ಟೆಯಲ್ಲಿ ಹುಡುಗಿಯನ್ನು ಚುಡಾಯಿಸಿದ ಎಂದು ಆರೋಪಿಸಿದ ಮಹಿಳೆಯೊಬ್ಬರು ಅಪ್ರಾಪ್ತ ಬಾಲಕನಿಗೆ ಚಪ್ಪಲಿ ಮತ್ತು ಕೋಲಿನಿಂದ ಥಳಿಸಿದ ವೈರಲ್ ವಿಡಿಯೋ ಸದ್ಯ ನೆಟ್ಟಿಗರ ಗಮನಕ್ಕೆ ಬಂದಿದ್ದು, ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ.
ಘಟನೆಯ ವಿವರ: ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳೆಯೊಬ್ಬರು ಅಪ್ರಾಪ್ತ ಬಾಲಕನಿಗೆ ಥಳಿಸುತ್ತಿರುವ ಆಘಾತಕಾರಿ ವಿಡಿಯೋ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡಿದೆ. ನಡುರಸ್ತೆಯಲ್ಲಿ ಸೇರಿದ್ದ ಜನರ ಮುಂದೆ ಬಾಲಕನಿಗೆ ಮನಬಂದಂತೆ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಬುಲಂದ್‌ಶಹರ್‌ನ ಜನನಿಬಿಡ ಅನ್ಸಾರಿ ರಸ್ತೆ ಮಾರ್ಕೆಟ್‌ನಲ್ಲಿ ಸೆರೆಯಾದ ಈ ವಿಡಿಯೋ ನೋಡಿದ ನೆಟ್ಟಿಗರು ಮಹಿಳೆ ಹಾಗೂ ಬಾಲಕ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆಯ ಸ್ಥಳದಲ್ಲಿ ಕಿಕ್ಕಿರಿದು ಸೇರಿದ್ದ ಜನರು ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ದೂರು ಅಥವಾ ಕ್ರಮ ಜರುಗಿರುವ ವರದಿಗಳು ಲಭ್ಯವಾಗಿಲ್ಲ. ಬುಲಂದ್‌ಶಹರ್‌ನ ಜನನಿಬಿಡ ಮಾರುಕಟ್ಟೆಯಲ್ಲಿ ಬುಧವಾರ (ನವೆಂಬರ್ 1) ಈ ಘಟನೆ ಸಂಭವಿಸಿದೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).