ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿಯೊಬ್ಬಳು ಇಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾಳೆ. ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಈ ಪ್ರಕರಣ ನಡೆದಿದೆ.
ಕೋಲಾರ ಮೂಲದ ಪೃಥ್ವಿರಾಜ್ (30 ) ಎಂಬಾತನನ್ನು ಮದುವೆಯಾಗಿದ್ದ ಕೃಷ್ಣವೇಣಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪೃಥ್ವಿರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಮೂರು ತಿಂಗಳ ಹಿಂದಷ್ಟೇ ಇವರ ಮದುವೆಯಾಗಿತ್ತು.
ಇದನ್ನೂ ಓದಿ: ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್ಫರ್’ ಅಸಾಧ್ಯ ಅನಿಸುತ್ತೆ!
ಕೃಷ್ಣವೇಣಿಯನ್ನು ಪತಿಯೇ ಕತ್ತು ಹಿಸುಕಿ ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಲಾರಂಭಿಸಿದ್ದಾರೆ.