ನ್ಯೂಸ್

ಒತ್ತುವರಿ ತೆರವು ಕಾರ್ಯಾಚರಣೆಗೆ ವಿರೋಧ; ಗುಡಿಸಿಲಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಳ್ಳಲು ಮುಂದಾದ ಮಹಿಳೆ

ಉನ್ನಾವೋ: ಸರ್ಕಾರಿ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಖಂಡಿಸಿ ಮಹಿಳೆ ತನ್ನ ಮಕ್ಕಳೊಂದಿಗೆ ಸೀಮೆ ಎಣ್ಣೆ ಸುರಿದುಕೊಂಡು ತಮ್ಮ ಗುಡಿಸಿಲಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಳ್ಳಲು ಮುಂದಾದ ಘಟನೆಯೂ ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯ, ಹಸನ್​ಘಂಜ್ ತಾಲ್ಲೂಕಿನ, ವಿಕ್ರಂ ಖೇಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಕುಟಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮದ ಅಜಯ್​ ಎಂಬುವವರ ವಿರುದ್ದ ದೂರುಗಳು ಸಲ್ಲಿಕೆಯಾಗಿದ್ದವು. ಗುರುವಾರ ಗ್ರಾಮಕ್ಕೆ ತೆರಳಿದ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಅತಿಕ್ರಮಣ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸುವಂತೆ ಸೂಚಿಸಿದ್ದರು.

ಕಂದಾಯ ಅಧಿಕಾರಿಗಳು ಭೇಟಿ ನೀಡಿದ ನಂತರ ಮಹಿಳೆ ಗುಡಿಸಿಲಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಅವಘಡ ತಪ್ಪಿಸಿದ್ಧಾರೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಸನ್​ಘಂಜ್​ ಉಪವಿಭಾಗಧಿಕಾರಿ(SDM) ಅಂಕಿತ್​ ಶುಕ್ಲಾ ಈ ಮೊದಲು ಅಜಯ್​ ಎಂಬುವವರ ವಿರುದ್ದ ಹಲವು ಭಾರಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಅದರಂತೆ ಣಾವು ಸ್ಥಳ ಪರಿಶೀಲಿಸಿ ಅತಿಕ್ರಮಣ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸುವಂತೆ ಸೂಚಿಸಿ ತೆರಳಿದ ನಂತರ ಗುಡಿಸಿಲಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ್ದಾರೆ ಎಂಧು ತಿಳಿಸಿದ್ಧಾರೆ.