ಬಂದರಿನ ಪರಿಸರ ಸುಸ್ಥಿರತೆ ಮತ್ತು ಹಸಿರು ಉಪಕ್ರಮಗಳ ಬದ್ಧತೆಯನ್ನು ಪುನರುಚ್ಚರಿಸುವ ಭಾಗವಾಗಿ ಬಂದರು ಆವರಣದಲ್ಲಿ ಬೃಹತ್ ಗಿಡ ನೆಡುವ ಅಭಿಯಾನವನ್ನು ಆಯೋಜಿಸಲಾಗಿತ್ತು. ಎನ್‌ಎಂಪಿಎ ಉಪಾಧ್ಯಕ್ಷರಾದ ಎಸ್. ಶಾಂತಿ ಅವರು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು. 
ನ್ಯೂಸ್

ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ಪ್ರಕೃತಿಯಿಂದ ಸ್ಫೂರ್ತಿ ಪಡೆಯೋಣ; ಹವಾಮಾನ ಸಂರಕ್ಷಣೆಗಾಗಿ; ನಮ್ಮೆಲ್ಲರ ಭವಿಷ್ಯಕ್ಕಾಗಿ ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು.
ಬಂದರಿನ ಪರಿಸರ ಸುಸ್ಥಿರತೆ ಮತ್ತು ಹಸಿರು ಉಪಕ್ರಮಗಳ ಬದ್ಧತೆಯನ್ನು ಪುನರುಚ್ಚರಿಸುವ ಭಾಗವಾಗಿ ಬಂದರು ಆವರಣದಲ್ಲಿ ಬೃಹತ್ ಗಿಡ ನೆಡುವ ಅಭಿಯಾನವನ್ನು ಆಯೋಜಿಸಲಾಗಿತ್ತು. ಎನ್‌ಎಂಪಿಎ ಉಪಾಧ್ಯಕ್ಷರಾದ ಎಸ್. ಶಾಂತಿ ಅವರು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ವಿಜಿಲೆನ್ಸ್ ಅಧಿಕಾರಿ ಪದ್ಮನಾಭಾಚಾರ್ ಕೆ. ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ಅವರು ಉಪಸ್ಥಿತರಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಶಾಂತಿ ಅವರು ವಹಿಸಿದ್ದರು. ಎನ್‌ಎಂಪಿಎ ಮುಖ್ಯ ಇಂಜಿನಿಯರ್ ರವೀಂದ್ರ ರೆಡ್ಡಿ ಸ್ವಾಗತಿಸಿದರು. ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ದೀಪಕ್ ರಾಥ್ ವಂದಿಸಿದರು. ಬಂದರಿನ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಸ್ಥಿರ ಅಭಿವೃದ್ಧಿಗೆ ಕೈಜೋಡಿಸುವ ಸಂಕಲ್ಪ ಮಾಡಿದರು.