ವಿಶ್ವ ಸೊಳ್ಳೆ ದಿನ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು. 
ನ್ಯೂಸ್

ವಿಶ್ವ ಸೊಳ್ಳೆ ದಿನ ಅರಿವು ಕಾರ್ಯಕ್ರಮ

ಎಂ.ರವಿ

ಶನಿವಾರಸಂತೆ: ಪ್ರಾಥಮಿಕ ಆರೋಗ್ಯ ಕೇಂದ್ರ ಕೊಡ್ಲಿಪೇಟೆ, ಶನಿವಾರಸಂತೆ ಭಾರತಿ ವಿದ್ಯಾ ಸಂಸ್ಥೆ ಪ್ರೌಢಶಾಲೆ ಸಹಯೋಗದಲ್ಲಿ ವಿಶ್ವ ಸೊಳ್ಳೆ ದಿನ ಕುರಿತು ಆರೋಗ್ಯ ಅರಿವು ಕಾರ್ಯಕ್ರಮವನ್ನು ಭಾರತಿ ಪ್ರೌಢಶಾಲೆ ಅವರಣದಲ್ಲಿ ಬುಧವಾರ ಆಯೋಜಿಸಲಾಗಿತ್ತು.

ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಮಲೇರಿಯಾ ಜ್ವರ ಶೀಘ್ರ ವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ನೀಡುವುದರ ಮೂಲಕ ಗುಣಪಡಿಸಬಹುದು. ಡೆಂೆ, ಮಲೇರಿಯಾ, ಚಿಕೂನ್ ಗುನ್ಯಾ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ಮಾತನಾಡಿ, ಕ್ಷಯರೋಗ ನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳುವುದರ ಮೂಲಕ ಕ್ಷಯ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ತಿಳಿಸಿದರು.

ಭಾರತಿ ಪ್ರೌಢಶಾಲೆ ಮುಖ್ಯಶಿಕ್ಷಕ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ದುಂಬಿತಾ, ಪ್ರಯೋಗ ಶಾಲೆ ತಂತ್ರಜ್ಞ ಅಧಿಕಾರಿ ರಶೀದ್, ಆಶಾ ಕಾರ್ಯಕರ್ತೆ ಜ್ಯೋತಿ, ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕರಾದ ಮಂಗಳಾ, ಶಬಾನಾ, ಭವಾನಿ, ಸರೋಜಿನಿ ಹಾಗೂ ಅರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ಶೈಲಜಾ ಹಾಜರಿದ್ದರು.