ನ್ಯೂಸ್

ವಿಶೇಷ ಉಚಿತ ಕಾರ್ಯಾಗಾರ ಜೂ.1ರಂದು

ಬೀದರ್: ವಿನ್ನರ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ನಗರದ ಹೊಸ ಬಸ್ ನಿಲ್ದಾಣದ ಸಮೀಪ ಇರುವ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಜೂನ್ 1 ರಂದು ಬೆಳಿಗ್ಗೆ 10.30ಕ್ಕೆ ಉಚಿತ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದಲ್ಲಿ ಖ್ಯಾತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದಾರೆ. ಪರೀಕ್ಷೆ ಬರೆಯಲಿರುವ ಜಿಲ್ಲೆಯ ಅಭ್ಯರ್ಥಿಗಳು ಕಾರ್ಯಾಗಾರದ ಪ್ರಯೋಜನ  ಪಡೆಯಬೇಕು ಎಂದು ಕೇಂದ್ರದ ನಿರ್ದೇಶಕಿ ಪೂಜಾ ಹನುಮಂತರಾವ್ ಪಾಟೀಲ ಮನವಿ ಮಾಡಿದ್ದಾರೆ.

ಕಾರ್ಯಾಗಾರದ ಕುರಿತು ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗೆ ಮೊಬೈಲ್ ಸಂಖ್ಯೆ 9538360707 ಅಥವಾ 8970850873 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.