ಯಲಬುರ್ಗಾ: ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗುವ ನಿರೀಕ್ಷೆಯಿಂದ ಅಭಿಮಾನಿಗಳು, ಕಾರ್ಯಕರ್ತರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ.ಶಿವಕುಮಾರ ಉಪಮುಖ್ಯಂತ್ರಿಯಾಗಿ ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಸಂಪುಟದಲ್ಲಿ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆಂದು ಭಾವಿಸಿ ಕ್ಷೇತ್ರದ ನೂರಾರು ಕಾರ್ಯಕರ್ತರು ರಾಯರಡ್ಡಿಗೆ ಶುಭ ಕೋರಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಈಗಾಗಲೇ ಕೆಲವರು ರಾಯರಡ್ಡಿ ಭೇಟಿಯಾಗಿ, ಸಚಿವ ಸ್ಥಾನ ಸಿಗಲೆಂದು ಶುಭ ಕೋರುತ್ತಿದ್ದಾರೆ. ಅಭಿಮಾನಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಕಾರು, ಬಸ್‌ನಲ್ಲಿ ತೆರಳುತ್ತಿದ್ದಾರೆ. ರಾಯರಡ್ಡಿ ಕ್ರಿಯಾಶೀಲ ರಾಜಕಾರಣಿಯಾಗಿದ್ದು, ಸಚಿವರಾದರೆ ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಯಾಗಲಿದೆ. ಯಲಬುರ್ಗಾವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಅವರು ಸಚಿವರಾಗಬೇಕೆಂದು ಬೇಡಿಕೆ ಇಟ್ಟಿದಾರೆ ಎನ್ನಲಾಗಿದೆ.
ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ ಉಪಮುಖ್ಯಮಂತ್ರಿಯಾಗಿ ಮೇ 20 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ನಮ್ಮ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಸಚಿವರಾಗುವ ನಿರೀಕ್ಷೆಯಿದೆ. | ಶಿವನಗೌಡ ದಾನರಡ್ಡಿ, ಬ್ಲಾಕ್ ಕಾಂಗ್ರೆಸ್ ವಕ್ತಾರ, ಯಲಬುರ್ಗಾ