ನ್ಯೂಸ್

ದೆಹಲಿಯಲ್ಲಿ ಮತ್ತೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ

ನವದೆಹಲಿ: ಕಳೆದ ಕೆಲ ದಿನಗಳಿಂದ ಉತ್ತರ ಭಾರತದ ಹಲವು ಭಾಗಗಳಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಮತ್ತೊಮ್ಮೆ ಅಪಾಯ ಮಟ್ಟ(204.50 ಮೀಟರ್​) ತಲುಪಿದೆ.

ಕೇಂದ್ರ ಜಲ ಆಯೋಗ ಮಂಗಳವಾರ ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಸಂಜೆ 6 ಘಂಟೆ ವೇಳೆಗೆ ಯಮುನಾ ನದಿ ನೀರಿನ ಮಟ್ಟವು 204.50 ಮೀಟರ್​ರಷ್ಟಿದೆ ಎಂದು CWC ವೆಬ್​ಸೈಟ್​ನಲ್ಲಿ ತಿಳಿಸಲಾಗಿದೆ.

ಯಮುನಾ ನದಿ ಅಪಾಯ ಮಟ್ಟ ತಲುಪಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಕ್ಷಣಾ ಇಲಾಖೆಯ ಅಧಿಕಾರಿಯೊಬ್ಬರು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆಯಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಅನಾಹುತಕ್ಕೆ ಆಸ್ಪದ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.