ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ಹೂಡಿದ್ದ ಮಾನನಷ್ಟ ಪ್ರಕರಣ ರದ್ದುಕೋರಿ ಯತ್ನಾಳ್ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾ. 21ಕ್ಕೆ ಮುಂದೂಡಿದೆ
‘ದಿನೇಶ್ ಗುಂಡೂರಾವ್ ಮನೆಯಲ್ಲಿಯೇ ಅರ್ಧ ಪಾಕಿಸ್ತಾನ ಇದೆ ’ಎಂಬುದಾಗಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಯತ್ನಾಳ್ ಅವರ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.
ಈ ಪ್ರಕರಣದಲ್ಲಿ ವ್ಯಾಪಕವಾದ ವಿಷಯಗಳು ಅಡಗಿದ್ದು, ಆ ಸಂಬಂಧ ವಿಚಾರಣೆ ನಡೆಸುವುದಾಗಿ ತಿಳಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾ.21 ಕ್ಕೆ ಮುಂದೂಡಿದೆ. ಯತ್ನಾಳ ಪರ ವಕೀಲ ಪಿ. ವೆಂಕಟೇಶ್ ದಳವಾಯಿ ವಾದ ಮಂಡಿಸಿದ್ದರು.