ಉತ್ತರಪ್ರದೇಶ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಎಕ್ಸ್ನಲ್ಲಿ (ಹಿಂದಿನ ಟ್ವಿಟರ್) ಇದೀಗ ಬರೋಬ್ಬರಿ 25.9 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ಕಳೆದ ಒಂದು ದಿನಗಳಲ್ಲಿ 2.67 ಲಕ್ಷಕ್ಕೂ ಹೆಚ್ಚು ಜನರು ತಮ್ಮ ನೆಚ್ಚಿನ ನಾಯಕನನ್ನು ಟ್ವಟರ್ನಲ್ಲಿ ಅನುಸರಿಸಲು ಪ್ರಾರಂಭಿಸಿದ್ದಾರೆ.
ಸಾಮಾಜಿಕ ಜಾಲತಾಣವಾದ 'ಎಕ್ಸ್' ಇತ್ತೀಚೆಗೆ ಬಿಡುಗಡೆಗೊಳಿಸಿದ ಅಂಕಿಅಂಶಗಳು ಹೀಗಿದೆ. ಪ್ರಸ್ತುತ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಟ್ವಿಟರ್ನಲ್ಲಿ ಸುಮಾರು 26 ಮಿಲಿಯನ್ (25,981,782) ಅನುಯಾಯಿಗಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಖಾತೆಗೆ 6.32 ಲಕ್ಷ ಹೊಸ ಅನುಯಾಯಿಗಳು ಸೇರ್ಪಡೆಯಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಎಕ್ಸ್ ರಿಲೀಸ್ ಮಾಡಿರುವ ಪಟ್ಟಿಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎರಡನೇ ಸ್ಥಾನದಲ್ಲಿದ್ದಾರೆ. ಕಳೆದ 30 ದಿನಗಳಲ್ಲಿ 2,67,419 ಜನರು ಯೋಗಿ ಅವರನ್ನು ಟ್ವಿಟರ್ನಲ್ಲಿ ಅನುಸರಿಸುತ್ತಿದ್ದು, ಯುಪಿ ಸಿಎಂ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದ್ದಾರೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).