ನ್ಯೂಸ್

ನೀವು ಜನರ ಆಸ್ತಿ, ನೂರುಕಾಲ ಬಾಳಬೇಕು; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನೀವು ಜನಗಳ ಆಸ್ತಿ, ನೀವು ಹಲವಾರು ವರ್ಷಗಳ ಕಾಲ ನಮ್ಮ ಜತೆ ಇರಬೇಕು. ಮುಂದಿನ ದಿನಗಳಲ್ಲಿ ಜೀವನ ಶೈಲಿ ಬದಲಿಸಿಕೊಳ್ಳಿ. ಸರಿಯಾಗಿ ಊಟ ಮಾಡಿ, ನಿದ್ದೆ ಮಾಡಿ ಎಂದು ಆಸ್ಪತ್ರೆಯಿಂದ ಬಿಡುಗಡೆಯಾದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಡಿದ ಮನವಿ ಇದು.

ತಂದೆ-ತಾಯಿ ಮಾಡಿದ ಜನಪರ ಕೆಲಸಗಳು ಅವರನ್ನು ಕಾಪಾಡಿವೆ. ನಾವು ಸಹಜವಾಗಿ ಒತ್ತಡದಲ್ಲಿದ್ದೆವು. ಹಾಗಾಗಿ ಮಾಧ್ಯಮಗಳ ಜತೆಗೆ ಈವರೆಗೂ ಮಾತಾಡಲು ಆಗಲಿಲ್ಲ. ಮಗನಾಗಿ ನಮ್ಮ ತಂದೆ ಅವರ ಬಳಿ ಕೇಳುವುದಿಷ್ಟೇ; ಅವರು ನೂರು ಕಾಲ ಬದುಕಿ ಜನ ಸೇವೆ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.