ನ್ಯೂಸ್

ಸಾಲ ನೀಡುವುದಾಗಿ ಆನ್​ಲೈನ್ ಆ್ಯಪ್​ನಲ್ಲಿ ಮೋಸ, ಮನನೊಂದು ವಿಡಿಯೋ ಮಾಡಿ ಯುವಕ ಆತ್ಮಹತ್ಯೆ | suicide

ಚಾಮರಾಜನಗರ: ಆನ್​ಲೈನ್ ಆ್ಯಪ್​ನಲ್ಲಿ ಸಾಲ ನೀಡುವುದಾಗಿ ನಂಬಿಸಿ ಸುಮಾರು 2.5 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ನಡೆದಿದೆ. ಆನ್​ಲೈನ್ ಮೂಲಕ ಹಣ ವರ್ಗಹಿಸಿಕೊಂಡು ಮೋಸ‌ ಮಾಡಿರುವುದಾಗಿ ಯುವಕ ಮನನೊಂದು ವಿಡಿಯೋ ಮಾಡಿ ನೇಣು ಬಿಗಿದು ಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾ‌ನೆ. ಮೃತ ವ್ಯಕ್ತಿಯನ್ನು 30 ವರ್ಷದ ಯುವಕ ರಾಜಪ್ಪ ಎನ್ನಲಾಗಿದೆ.

ಮನೆಗೆ ಆಧಾರವಾಗಿದ್ದ ಮಗನ ಕಳೆದುಕೊಂಡ ತಾಯಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಿಯಲ್ಲಿ ದೂರು ದಾಖಲಾಗಿದೆ.

ನೇಣು ಬಿಗಿದುಕೊಂಡ ವ್ಯಕ್ತಿಯನ್ನು ಹತ್ತಿರದ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ದುರಾದೃಷ್ಟವಷಾತ್​ ಚಿಕಿತ್ಸೆ ಫಲಕಾರಿಯಾಗದೆ ಆ್ಪತ್ರೆಯಲ್ಲಿಯೇ ಆತ ಮೃತ ಪಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ರವಾನಿಸಲಾಗಿದೆ.