ನ್ಯೂಸ್

ಬೈಕ್ ಸ್ಕಿಡ್​​ ಆಗಿ ಬಿದ್ದು ಯುವಕ ಸಾವು

ಬೆಂಗಳೂರು: ಹೊರ ವರ್ತುಲ ರಸ್ತೆಯ ಮರಿಯಪ್ಪನಪಾಳ್ಯ ಜಂಕ್ಷನ್ ಬಳಿ ಬುಧವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.

ಮೂಲತಃ ಹಾಸನ ಜಿಲ್ಲೆಯ ಕೀರ್ತಿ(೨೫) ಅವರು ಕೆಂಗೇರಿ ಉಪನಗರದಲ್ಲಿ ವಾಸವಾಗಿದ್ದರು. ಪೀಣ್ಯದ ಬ್ರೇಡ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅವರು ಕಾರ್ಖಾನೆಯಿಂದ ಡ್ಯೂಕ್ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧಾರಾಕಾರ ಮಳೆ ನಡುವೆಯೂ ಕೀರ್ತಿ ನಿರ್ಲಕ್ಷ್ಯದಿಂದ ಅತಿ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ರಸ್ತೆ ತಿರುವಿನಲ್ಲಿ ಬೈಕ್ ಜಾರಿದ (ಸ್ಕಿಡ್​) ಪರಿಣಾಮ ಕೀರ್ತಿ ಅವರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ನಂತರ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸ್ವಲ್ಪ ಸಮಯದಲ್ಲೇ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕೀರ್ತಿ, ಅಪಘಾತದ ಸಂದರ್ಭದಲ್ಲಿ ತಲೆಗೆ ಹೆಲ್ಮೆಟ್ ಧರಿಸದೆ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಇಟ್ಟುಕೊಂಡು ಹೋಗುತ್ತಿದ್ದರು. ಹೀಗಾಗಿ, ಅಪಘಾತದಲ್ಲಿ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಅವರು ಹೆಲ್ಮೆಟ್ ಧರಿಸಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.