ನ್ಯೂಸ್

ಚಲಿಸುತ್ತಿದ್ದ ಬೈಕ್ ಮೇಲೆ ನಿಂತು ಸ್ಟಂಟ್‌ ಮಾಡಲು ಹೋಗಿ ರಸ್ತೆಗೆ ಬಿದ್ದ ಯುವಕ; ಮುಂದೇನಾಯ್ತು?| Video Viral

Video Viral: ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ರೀಲ್ಸ್​​ ಮಾಡುವ ಹುಚ್ಚು ಹೆಚ್ಚಾಗುತ್ತಿದ್ದಂತೆಯೇ, ಫೇಮಸ್​​ ಆಗುವ ಸಲುವಾಗಿ ಯುವ ಜನರು ಅಪಾಯಕಾರಿ ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಇಂತಹ ಅಪಾಯಕಾರಿ ಸಾಹಸಗಳಿಂದ ಕೆಲವೊಮ್ಮೆ ಎಷ್ಟೋ ಜನರು ಪ್ರಾಣವನ್ನೇ ಕಳೆದುಕೊಂಡಿದ್ದುಂಟು.

ಅದೇ ರೀತಿ ಇಲ್ಲೊಬ್ಬ ಯುವಕ ಚಲಿಸುತ್ತಿದ್ದ ಬೈಕ್ ಮೇಲೆ ನಿಂತು ಸ್ಟಂಟ್ ಮಾಡಲು ಹೋಗಿ, ಆಯತಪ್ಪಿ ಕೆಳಗೆ ಬಿದ್ದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗುರುಗ್ರಾಮದ ದೆಹಲಿ-ಜೈಪುರ ಎಕ್ಸ್‌ಪ್ರೆಸ್‌ವೇ ಮಧ್ಯ ಯುವಕನೊಬ್ಬನು ಚಲಿಸುತ್ತಿದ್ದ ಬೈಕ್ ಮೇಲೆ ನಿಂತು ಸ್ಟಂಟ್ ಮಾಡಲು ಹೋಗಿ, ಬ್ಯಾಲೆನ್ಸ್ ತಪ್ಪಿ ಕೆಳಗೆ ಬಿದ್ದಿದ್ದಾನೆ. ಅವನು ಬಿದ್ದ ನಂತರವೂ ಬೈಕ್​ ರೋಡಿನಲ್ಲಿ ಹೋಗುತ್ತಿದೆ. ಯುವಕ ಬಿದ್ದಿದ್ದನ್ನು ನೋಡಿದ ಸ್ಥಳೀಯರು ಆತನ ಸಹಾಯಕ್ಕೆ ಧಾವಿಸಿದ್ದಾರೆ.

ವೈರಲ್ ವಿಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ, ಯುವಕನನ್ನು ಗುರುತಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗುರುಗ್ರಾಮ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)