ಘಾಜಿಯಾಬಾದ್: ಕಳೆದ ಕೆಲ ದಿನಗಳಿಂದ ಜಿಮ್ನಲ್ಲಿ ವರ್ಕೌಟ್ ಮಾಡುವ ವೇಳೆ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅತಿಯಾದ ವ್ಯಾಯಾಮ, ಪ್ರೋಟೀನ್ ಶೇಕ್, ಹೆಚ್ಚಿನ ಒತಡ ಸೇರಿದಂತೆ ಇತರೆ ಅಂಶಗಳಿಂದ ಹೃದಯಾಘಾತ ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ.
ಇದೀಗ ಜಿಮ್ನಲ್ಲಿ ವರ್ಕೌಟ್ ಮಾಡುವ ವೇಳೆ ಯುವಕನೊಬ್ಬ ಹಠಾತ್ ಕುಸಿದು ಬಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೃತರನ್ನು ಬಿಹಾರ ಮೂಲದ ಸಿದ್ಧಾರ್ಥ್ಕುಮಾರ್ ಸಿಂಗ್ (19) ಎಂದು ಗುರುತಿಸಲಾಗಿದೆ. ಘಾಜಿಯಾಬಾದ್ನ ಸರಸ್ವತಿ ವಿಹಾರದಲ್ಲಿರುವ ಜಿಮ್ನಲ್ಲಿ ವರ್ಕೌಟ್ ಮಾಡುವ ವೇಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಥ್ರೆಡ್ಮಿಲ್ನಲ್ಲಿ ವ್ಯಾಯಾಮ ಮಾಡುವಾಗ ಹಠಾತ್ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಮತ್ತಿಬ್ಬರು ಕೂಡಲೇ ಅವರ ರಕ್ಷಣೆಗೆ ಧಾವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರು ಯುವಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಯುವಕನ ಮೃತದೇಹವನ್ನು ಆತನ ಪೋಷಕರು ಬಿಹಾರದಲ್ಲಿರುವ ಸ್ವಗ್ರಾಮಕ್ಕೆ ಕೊಂಡೊಯ್ದಿದ್ದಾರೆ.