ಸಾಂದರ್ಭಿಕ ಚಿತ್ರ  
ನ್ಯೂಸ್

ಯುವಕನನ್ನು ಸ್ಕೂಟಿ ಹಿಂದೆ ಕಟ್ಟಿ ಎಳೆದೊಯ್ದ ಪುಂಡರು: ಸಿಸಿಟಿವಿಯಲ್ಲಿ ಭೀಕರ ಕೃತ್ಯ ಸೆರೆ

ಬರೇಲಿ: ಸ್ಕೂಟಿ ಮೇಲೆ ಕುಳಿತಿದ್ದ ಮೂವರು ಯುವಕರು ಮತ್ತೊರ್ವ ಯುವಕನನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಬಳಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬರೇಲಿ ಜಿಲ್ಲೆಯ ಬರದರಿ ಪ್ರದೇಶದ ಮೊಹಲ್ಲಾ ಸಂಜಯ್ ನಗರದ ಹೋಳಿ ಚೌಕದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. 50 ಸೆಕೆಂಡುಗಳ ಈ ವಿಡಿಯೋದಲ್ಲಿ, ಘಟನೆಯು 35 ಸೆಕೆಂಡುಗಳ ನಂತರ ಗೋಚರಿಸುತ್ತಿದೆ. ಸ್ಕೂಟಿಯಲ್ಲಿ ಕುಳಿತಿದ್ದ ಮೂವರು ಪುಂಡರು ಯುವಕನೊಬ್ಬನನ್ನು ಸ್ಕೂಟಿಯ ಹಿಂದೆ ಕಟ್ಟಿ ಎಳೆದೊಯ್ದಿದ್ದು, ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ.


ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದ್ದು, ಘಟನೆ ಕುರಿತು ಅಧಿಕಾರಿಗಳು ಅಕ್ಕಪಕ್ಕದ ಜನರಿಂದ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೇ, ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರಿಂದಲೂ ದೂರು ಬಂದಿಲ್ಲ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.(ಏಜೆನ್ಸೀಸ್​)