ಮಂಗಳೂರು: ಚಿಕಿತ್ಸೆ ನೀಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ದಂತ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಹಲ್ಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಬಂದಾಗ ವೈದ್ಯ ಡಾ. ಸುಧಾಕರ್ ಲೈಂಗಿಕ ಕಿರುಕುಳ ನೀಡಿದರು ಎಂದು 23 ವರ್ಷದ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.
ದೂರು ದಾಖಲಿಸಿದ ಪೊಲೀಸರು ವೈದ್ಯನನ್ನು ಬಂಧಿಸಿ ವಿಚಾಣೆಗೆ ಒಳಪಡಿಸಿದ್ದಾರೆ. ಡಾ. ಸುಧಾಕರ್ ಮೇಲೆ ಹಿಂದೆ ಇದೇ ರೀತಿ ಆರೋಪಗಳು ಕೇಳಿ ಬಂದಿದ್ದವು. (ದಿಗ್ವಿಜಯ ನ್ಯೂಸ್)