ನ್ಯೂಸ್

ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ರೈಲು ಸೇವೆ ಸ್ಥಗಿತ

ಬೆಂಗಳೂರು: ಹೊಸಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಹಳಿಯ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜೂನ್​ 10 ( ಸೋಮವಾರ) ರಾತ್ರಿ 8.56ಕ್ಕೆ ನಡೆದಿದೆ.

ಯುವಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಯುವಕನ ಆತ್ಮಹತ್ಯೆ ಹೈಡ್ರಾಮಾದಿಂದ ಸುಮಾರು 30 ನಿಮಿಷಗಳ ಕಾಲ ಮೆಟ್ರೋ ಸಂಚಾರ ಅಸ್ತವ್ಯಸ್ತವಾಗಿತ್ತು. ಇದರಿಂದ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು

ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ, ಮೆಜೆಸ್ಟಿಕ್ ನಿಲ್ದಾಣದಿಂದ ವೈಟ್​ಫೀಲ್ಡ್ ನಡುವೆ ಮೆಟ್ರೋ ಸಂಚಾರ ಮಾಡುತ್ತದೆ. ಘಟನೆ ನಂತರ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲೇ ರೈಲು ನಿಂತಿದ್ದು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ-ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತದಿಂದ ಪ್ರಯಾಣಿಕರು ಪರದಾಡಿದ್ದಾರೆ.

ಬಳಿಕ 9.30 ಗಂಟೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ಎಂದಿನಂತೆ ರೈಲು ಸೇವೆ ಪುನರ್ ಆರಂಭಿಸಲಾಯಿತು.