ನ್ಯೂಸ್

YS Sharmila: ಜನರಿಗೆ ವೈಸಿಪಿ ಮೇಲೆ ನಂಬಿಕೆ ಇಲ್ಲ.. ಸಹೋದರನನ್ನು ಕೆಣಕಿದ ಶರ್ಮಿಳಾ

ಅಮರಾವತಿ: ಜನರು ವೈಸಿಪಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಎಪಿಸಿಸಿ ಅಧ್ಯಕ್ಷೆ ವೈಎಸ್ ಶರ್ಮಿಳಾ(YS Sharmila) ಟೀಕಿಸಿದರು. ಸ್ವತಃ ಸಹೋದರನ ವಿರುದ್ಧ ಸಹೋದರಿ ಟೀಕಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಜನರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ವಿಶ್ವಾಸಾರ್ಹತೆಯೊಂದಿಗೆ ಅವರ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ನಡೆಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಜಯವಾಡದ ಕಾಂಗ್ರೆಸ್ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ರಾಜ್ಯದಲ್ಲಿ ವಿಶ್ವಾಸಾರ್ಹತೆ ಹೊಂದಿರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಎಪಿಸಿಸಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಜಿಲ್ಲಾ, ಕ್ಷೇತ್ರ, ಮಂಡಲ ಮಟ್ಟದ ಮುಖಂಡರೊಂದಿಗೆ ವಿಶೇಷ ಸಭೆ ನಡೆಸಲಾಗುತ್ತಿದೆ ಎಂದರು.

ನೀಡಿದ ಭರವಸೆಗಳನ್ನು ಅನುಷ್ಠಾನಗೊಳಿಸುವಲ್ಲಿ ವೈಸಿಪಿಗೆ ವಿಶ್ವಾಸಾರ್ಹತೆ ಇಲ್ಲ ಎಂಬುದನ್ನು ಜನತೆ ಅರ್ಥ ಮಾಡಿಕೊಂಡಿದ್ದಾರೆ. ಜನರು ವೈಸಿಪಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು. ಜನರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ವಿಶ್ವಾಸಾರ್ಹತೆಯೊಂದಿಗೆ ಅವರ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ನಡೆಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.