ನ್ಯೂಸ್

ಯುವನಿಧಿಗೆ ಅರ್ಹರು ಮತ್ತು ಉದ್ಯಮಶೀಲತೆಗಾಗಿ ಕೌಶಲ ಪೋರ್ಟಲ್‌ದಲ್ಲಿ ಹೆಸರು ನೋಂದಾಯಿಸಿಕೊಳ್ಳಿ

೧೨ರಂದು ಶಿವಮೊಗ್ಗದಲ್ಲಿ ಚಾಲನೆ | ಬೆಳೆಹಾನಿ ಪರಿಹಾರ ಡಬಲ್  ವಿಜಯವಾಣಿ ಸುದ್ದಿಜಾಲ ಕಲಬುರಗಿ

 ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಜ.೧೨ ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. ಇದರ ಲಾಭ ಪಡೆಯಲು ಅರ್ಹ ಫಲಾನುಭವಿಗಳು ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ ತರಬೇತಿ ಪಡೆಯಲು ತಮ್ಮ ಹೆಸರನ್ನು ಪೋರ್ಟಲ್‌ದಲ್ಲಿ ಪ್ರತ್ಯೇಕವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.ನಗರದ ಎ.ಬಿ.ವಾಜಪೇಯಿ ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಸ್ಪರ್ಧಾತ್ಮಕ ತರಬೇತಿ ಕೇಂದ್ರಕ್ಕೆ  ಭೇಟಿ ನೀಡಿ ಪರಿಶೀಲಿಸಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಯುವನಿಧಿ ಯೋಜನೆ ಕರಪತ್ರಗಳನ್ನು ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಪದವಿ, ಪಿಜಿ ಮತ್ತು ಡಿಪ್ಲೋಮಾ ಪಾಸಾಗಿ ಆರು ತಿಂಗಳಿAದ ಉದ್ಯೋಗ ಸಿಗದಿರುವರು ಮಾತ್ರ ಯುವನಿಧಿ ಯೋಜನೆಗೆ ಅರ್ಹರು. ಕೌಶಲ ತರಬೇತಿಗೆ ಎಲ್ಲರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು. ಯುವ ನಿಧಿ ಯೋಜನೆ ಕೇವಲ ನಿರುದ್ಯೋಗಿಗಳಿಗೆ ಹಣ ನೀಡುವುದಷ್ಟಕ್ಕೆ ಸೀಮಿತವಾಗಿಲ್ಲ.ಅವರಿಗೆ ಉದ್ಯಮಶೀಲತೆ ಕಲಿಸಿ ಉದ್ಯೋಗ ನೀಡುವುದು ಆದ್ಯತೆಯಾಗಿದೆ.ಯುವಕರಿಗೆ ಸ್ಕಿಲ್ ಮ್ಯಾಪಿಂಗ್ ಮಾಡುವ ಮೂಲಕ ಉದ್ಯೋಗ ಕಲ್ಪಿಸಲಾಗುವುದು. ಯೋಜನೆಯ ನೋಂದಣಿಗೆ ಡಿ.೨೬ಕ್ಕೆ ನೋಂದಣಿಗೆ ಚಾಲನೆ ನೀಡಿದ್ದು, ರಾಜ್ಯದಲ್ಲಿ ೫ ಲಕ್ಷ  ಅರ್ಹರಿದ್ದು, ಕಲಬುರಗಿ ಜಿಲ್ಲೆಯಲ್ಲಿ ೯ ಸಾವಿರ ಜನರಿದ್ದಾರೆ. ಅವರಲ್ಲಿ ಇದುವರೆಗೂ ೧೧೭೫ ಯುವಕರು ನೋಂದಾಯಿಸಿಕೊAಡಿದ್ಧಾರೆ. ಯೋಜನೆಗೆ ಒಟ್ಟು ೨೫೦ ಕೋಟಿ ರೂ.ವೆಚ್ಚವಾಗಲಿದೆ. ಮುಂದಿನ ಸಲ ಮೊತ್ತ ದ್ವಿಗುಣಗೊಳ್ಳಲಿದೆ ಎಂದು ಹೇಳಿದರು.ಯುವಕರಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಸಚಿವ ಡಾ.ಶರಣಪ್ರಕಾಶ ಪಾಟೀಲ ಮತ್ತು ತಮ್ಮ ಜಂಟಿ ನೇತೃತ್ವದಲ್ಲಿ ಕೌಶಲ ಸಲಹಾ ಸಮಿತಿ ರಚಿಸಲಾಗಿದೆ.ಫೆಬ್ರವರಿ ಮೊದಲನೆ ವಾರದಲ್ಲಿ  ನೀಲಿ ನಕ್ಷೆ ಸಿದ್ದಪಡಿಸಲಾಗುವುದು. ನಗರದ ವಾಜಪೇಯಿ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ನೈಸ್ ಅಕಾಡೆಮಿ ಸ್ಥಾಪಿಸಿದ್ದು ಬಜೆಟ್‌ದೊಳಗೆ ಉದ್ಘಾಟಿಸಲಾಗುವುದು. ಬರದಿಂದ ಬೆಳೆ ಹಾನಿಯಾಗಿರುವ ರೈತರಿಗೆ ಈಗ ನೀಡುತ್ತಿರುವ ಪರಿಹಾರ ಮೊತ್ತವನ್ನು ದ್ವಿಗುಣಗೊಳಿಸಲು ಪ್ರಯತ್ನಿಸಲಾಗುವುದು ಎಂದರು.ಸುದ್ದಿಗೋಷಿಯಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಕೌಶಲ ಅಧಿಕಾರಿ ಮುರಳಿಧರ ರತ್ನಗಿರಿ, ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕಿ ಭಾರತಿ ಇದ್ದರು.