ನ್ಯೂಸ್

ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈರುಳ್ಳಿ ಹಾರ ಹಾಕಲು ಯತ್ನಿಸಿದ ಕಾಂಗ್ರೆಸ್​ ನಾಯಕಿಯರು

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಾಗಿದ್ದ ದಿಶಾ ಸಭೆಗೆ ಆಗಮಿಸುತ್ತಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈರುಳ್ಳಿ ಹಾರ ಹಾಕುವ ಯತ್ನ ವಿಫಲವಾಗಿದೆ.

ಈರುಳ್ಳಿ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್​ ಜಿಲ್ಲಾ ಅಲ್ಪ ಸಂಖ್ಯಾತ ವಿಭಾಗದ ಉಪಾಧ್ಯಕ್ಷೆ ನಗೀನಾ ಭಾನು ಎಂಬುವವರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈರುಳ್ಳಿ ಹಾರ ಹಾಕಲು ಯತ್ನಿಸಿದರು. ಸ್ಥಳದಲ್ಲಿ ಇದ್ದ ಪೊಲೀಸರು ಮಹಿಳೆಯನ್ನು ತಡೆದರು. ಈ ವಿಚಾರವಾಗಿ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಕಾಂಗ್ರೆಸ್​ ಮಹಿಳಾ ಕಾರ್ಯಕರ್ತೆಯರು ಇದೇ ವೇಳೆ ಪಕೋಡ ತಯಾರಿಸಿ ಸಾರ್ವಜನಿಕರಿಗೆ ಹಂಚಿ ಪ್ರತಿಭಟನೆ ನಡೆಸಿದರು.

ಈರುಳ್ಳಿ ಹಾರ ಹಾಕಲು ಯತ್ನಿಸಿದ ಕಾಂಗ್ರೆಸ್​ ನಾಯಕಿಯರು ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.