ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ಬಿಳಿಕೆರೆ ವ್ಯಾಪ್ತಿಯ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ 05, ಮಿನಿ ಅಂಗನವಾಡಿ ಕಾರ್ಯಕರ್ತೆ 01 , ಹಾಗೂ ಅಂಗನವಾಡಿ ಸಹಾಯಕಿಯರ 32 ಹುದ್ದೆಗಳ ಭರ್ತಿಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನಾಂಕವಾಗಿರುತ್ತದೆ.
ಅoಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಸಲ್ಲಿಸದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಜೂನ್ 15.2025 ಕ್ಕೆ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ 35 ವರ್ಷ ಮೀರಿರಬಾರದು. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಪಿ.ಯು.ಸಿ ತೇರ್ಗಡೆ ಹೊಂದಿರಬೇಕು, ಸಹಾಯಕಿ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್. ಸಿ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಂತ್ರಾoಶದಲ್ಲಿ ಅಳವಡಿಸುವ ಅರ್ಜಿ ಸಲ್ಲಿಕೆ ಮಾರ್ಗ ಸೂಚಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬಿಳಿಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ. ಸಂ:08221-29717 ನ್ನು ಸಂಪರ್ಕಿಸಬಹುದಾಗಿದೆ ಎಂದು ಬಿಳಿಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.