ನ್ಯೂಸ್

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗಳ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 83 ಅಂಗನವಾಡಿ ಕಾರ್ಯಕರ್ತೆ ಮತ್ತು 329 ಸಹಾಯಕಿಯರ ಹುದ್ದೆಗಳಿಗೆ ಸರ್ಕಾರದ ನಿಯಮಾವಳಿಯಂತೆ ಅಭ್ಯರ್ಥಿಗಳನ್ನು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆ ಸಮಿತಿಯಿಂದ ಅನುಮೋದಿಸಿದ ಅಭ್ಯರ್ಥಿಗಳನ್ನು ಸಂಬoಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಲಿಖಿತವಾಗಿ ಅಗತ್ಯ ಸಮರ್ಥನಿಯ ದಾಖಲೆಗಳೊಂದಿಗೆ ಸಂಬoಧಿಸಿದ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ವೇಳೆಯಲ್ಲಿ ಏಪ್ರಿಲ್ 19 ರ ಸಂಜೆ 5.30 ರೊಳಗಾಗಿ ಸಲ್ಲಿಸಬಹುದಾಗಿದೆ. ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.