ಮೈಸೂರು ಜಿಲ್ಲಾ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವವರಲ್ಲಿ ಕೆಲವು ಅಭ್ಯರ್ಥಿಗಳು 4 ವಿವಿಧ (photo, signature, documents and esign) ಹಂತಗಳನ್ನು ಪೂರ್ಣ ಮಾಡದೇ ಇರುವುದರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಮಾತ್ರ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಡಿಸೆಂಬರ್ 26 ರಿಂದ ಜನವರಿ 05 ರವರೆಗೆ ಕಾಲಾವಕಾಶ ನೀಡಲಾಗಿದೆ.
ಸದರಿ ಅಭ್ಯರ್ಥಿಗಳು https://karnemakaone.kar.nic.in/abcd/ ಮೂಲಕ ತಮ್ಮ ಅರ್ಜಿ ಸಲ್ಲಿಕೆ ಹಂತವನ್ನು ಪೂರ್ಣಗೊಳಿಸಬಹುದಾಗಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ತಿ.ನರಸೀಪುರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ದೂ. ಸಂ: 08227-297267, ಹುಣಸೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ದೂ. ಸಂ:08222-252254,ಮೈಸೂರು ನಗರದ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ದೂ. ಸಂ: 0821-2492962, ಮೈಸೂರು ಗ್ರಾಮಾಂತರದ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ದೂ. ಸಂ:0821-2567940, ಕೆ.ಆರ್.ನಗರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ದೂ. ಸಂ: 08223-262714,
ಪಿರಿಯಾಪಟ್ಟಣ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ದೂ. ಸಂ: 08223-274742, ನಂಜನಗೂಡು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ದೂ. ಸಂ: 08221-297188, ಬಿಳಿಗೆರೆಯ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ದೂ. ಸಂ: 08221-297171 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.