ನ್ಯೂಸ್

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳು ಪೂರೈಕೆಗೆ ಕ್ರಮ / ಎಂಎಲ್ಸಿ ಅನಿಲ್ ಕುಮಾರ್

ವಿಜಯವಾಣಿ ಸುದ್ದಿಜಾಲ ಕೋಲಾರ
ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ಬಂದಿದ್ದು, ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬAಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು, ಸರ್ಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ. ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.

ಅAಗನವಾಡಿ ಕಾರ್ಯಕರ್ತರು ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಜಾರಿ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ನೀವು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ದಿನನಿತ್ಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ, ಅವರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ, ಅಂಗನವಾಡಿಯಲ್ಲಿ ಮೂಲ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಸರ್ಕಾರವು ವಿತರಿಸಿದ ಸ್ಮಾರ್ಟ್ ಪೋನ್ ಮೂಲಕ ಅನೇಕ ಯೋಜನೆಗಳ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು ೨.೫೦ ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ. ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ. ಸರ್ಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.

ಚಿತ್ರ ೨೪ ಕೆ.ಎಲ್.ಆರ್. ೦೮ : ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಿಸಿದ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಎಂ.ಎಲ್. ಅನಿಲ್ ಕುಮಾರ್ ಇದ್ದರು.