ತರೀಕೆರೆಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಡಾ. ಕೆ.ಜೆ.ಕಾಂತರಾಜ್, ವಸಂತ್ ಕುಮಾರ್, ಪಾರ್ವತಮ್ಮ, ದಾದಾಪೀರ್, ವಿಶ್ವಜೀತ ಮೆಹತಾ ಮತ್ತಿತರರಿದ್ದರು.  
ನ್ಯೂಸ್

ಅಂಬೇಡ್ಕರ್ ಭವನ ಅಭಿವೃದ್ಧಿಗೆ 35 ಲಕ್ಷ ರೂ.

ತರೀಕೆರೆ: ಪಟ್ಟಣದ ಬಿ.ಆರ್.ಅಂಬೇಡ್ಕರ್ ಭವನ ಅಭಿವೃದ್ಧಿಗೆ 35 ಲಕ್ಷ ರೂ. ಮೀಸಲಿರಿಸಿದ್ದು ಸದ್ಯದಲ್ಲೇ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ಸೋಮವಾರ ಏರ್ಪಡಿಸಿದ್ದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಾಜಿ ಪ್ರಧಾನಿ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ. ಜಗಜ್ಯೋತಿ ಬಸವೇಶ್ವರರ ಹಾದಿಯಲ್ಲಿ ಅಸಮಾನತೆ ವಿರುದ್ಧ ಹೋರಾಡಿ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರ ಜೀವನಾದರ್ಶ ಪ್ರತಿಯೊಬ್ಬರಿಗೂ ಪ್ರೇರಣೆ ಆಗಬೇಕು ಎಂದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಉಭಯ ನಾಯಕರ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಯಿತು.

ಎಸಿ ಡಾ. ಕೆ.ಜೆ.ಕಾಂತರಾಜ್, ಪುರಸಭೆ ಅಧ್ಯಕ್ಷ ವಸಂತ್ ಕುಮಾರ್, ಉಪಾಧ್ಯಕ್ಷೆ ಪಾರ್ವತಮ್ಮ, ಸದಸ್ಯ ದಾದಾಪೀರ್, ತಹಸೀಲ್ದಾರ್ ವಿಶ್ವಜೀತ ಮೆಹತಾ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಜಿ.ರಮೇಶ್, ಬಿಇಒ ಎಚ್.ಪರಶುರಾಮಪ್ಪ, ಡಿವೈಎಸ್ಪಿ ಹಾಲಮೂರ್ತಿ ರಾವ್, ತಾಪಂ ಇಒ ಡಾ. ಆರ್.ದೇವೇಂದ್ರಪ್ಪ ಮತ್ತಿತರರಿದ್ದರು.