ನ್ಯೂಸ್

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ದಾಳಿ

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು 25 ಟೆಟ್ರಾ ಪ್ಯಾಕ್ ಮದ್ಯವನ್ನು ವಶಪಡೆಸಿಕೊಂಡಿದ್ದು, ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ತಾಲೂಕಿನ ರಂಗನಾಥಪುರ ಗ್ರಾಮದ ಸಿದ್ದಯ್ಯ ಎಂಬವರು ತಮ್ಮ ಮನೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಈ ಸಂಬಂಧ ವರುಣ ಪ್ರಕರಣ ದಾಖಲಾಗಿದೆ.