ನ್ಯೂಸ್

ಅತ್ಯಾಚಾರ ವಿಡಿಯೋ ವೈರಲ್ ಮಾಡಿದ್ದಕ್ಕೆ ಪ್ರಕರಣ ದಾಖಲು

ಗೋಣಿಕೊಪ್ಪ: ಅತ್ಯಾಚಾರ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಬಗ್ಗೆ ಕಾಲೇಜು ವಿದ್ಯಾರ್ಥಿನಿ ನೀಡಿರುವ ದೂರಿನನ್ವಯ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ ೧೯ರ ಹರೆಯದ ವಿದ್ಯಾರ್ಥಿನಿ ತನ್ನ ಮೇಲೆ ಒಂದು ವರ್ಷದ ಹಿಂದೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿ ದ್ದಾರೆ. ಈ ಹಿನ್ನೆಲೆಯಲ್ಲಿ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಬೆಳ್ಳೂರು ಗ್ರಾಮದ ಸಚಿನ್ (೨೨), ತಾವಳಗೇರಿ ಗ್ರಾಮದ ಶ್ರೀಕಂಠ (೨೩) ವಿರುದ್ಧ ಪ್ರಕರಣ ದಾಖಲಾಗಿದೆ.

೨೦೨೧ ರ ನವೆಂಬರ್ ತಿಂಗಳಿನಲ್ಲಿ ಕಾಲೇಜಿಗೆ ಬರುತ್ತಿದ್ದ ನನ್ನನ್ನು ಬಲತ್ಕಾರವಾಗಿ ಬೈಕ್‌ನಲ್ಲಿ ಗೆಸ್ಟ್ ಹೌಸ್‌ಗೆ ಕರೆದುಕೊಂಡು ಹೋಗಲಾಗಿತ್ತು.
ಅಲ್ಲಿ ಕುಡಿಯಲು ನೀಡಿದ ಕಾಫಿಯಲ್ಲಿ ಮತ್ತು ಬರೆಸುವ ಔಷಧ ನೀಡಿ, ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಮನೆಯಲ್ಲಿ ಹೇಳಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅದರಂತೆ ಈಗ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆಂದು ದೂರಿ ನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳಿಬ್ಬರು ತಲೆಮರೆಸಿಕೊಂಡಿದ್ದಾರೆ.