ನ್ಯೂಸ್

ಅತಿವೃಷ್ಟಿ ಹಾನಿ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ: ಸಿಎಂ

ಹುಬ್ಬಳ್ಳಿ: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಒಂದೆರಡು ದಿನಗಳಲ್ಲಿ ಸಂಪೂರ್ಣ ವರದಿ ಪಡೆದು, ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಹಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ಈಗಾಗಲೇ ಅತಿವೃಷ್ಟಿ ಬಗ್ಗೆ ಸಭೆ ನಡೆಸಲಾಗಿದೆ ಎಂದರು.