ನ್ಯೂಸ್

ಅನಧಿಕೃತ ಶೆಡ್ ತೆರವು

ಸೋಮವಾರಪೇಟೆ: ಪಟ್ಟಣದ ಸಿ.ಕೆ. ಸುಬ್ಬಯ್ಯ ರಸ್ತೆ ಹಾಗೂ ಮಡಿಕೇರಿ ರಸ್ತೆಯ ಬದಿಯಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡು ಶಾಶ್ವತವಾಗಿ ವ್ಯಾಪಾರಕ್ಕೆ ಮುಂದಾಗಿದ್ದ 6 ಅನಧಿಕೃತ ಅಂಗಡಿಗಳನ್ನು ಪ.ಪಂ. ಅಧಿಕಾರಿಗಳು ತೆರವುಗೊಳಿಸಿದರು.

ಪಟ್ಟಣ ವ್ಯಾಪ್ತಿಯ 6 ಕಡೆಗಳಲ್ಲಿ ಅನಧಿಕೃತವಾಗಿ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡಲಾಗುತ್ತಿದ್ದು, ತೆರವುಗೊಳಿಸುವಂತೆ ಸೂಚಿಸಿದ್ದರೂ ಸ್ಪಂದನೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಬುಧವಾರ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಏಕಾಏಕಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

ಪ.ಪಂ. ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯ ಬಿ.ಆರ್.ಮಹೇಶ್, ಪಿ.ಕೆ. ಚಂದ್ರು, ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯಾಧಿಕಾರಿ ಜಾಸಿಂ ಖಾನ್ ಇತರರು ಇದ್ದರು.