ನಗರದ ಗ್ರಾಮಾಂತರ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸುವುದರಿಂದ ಜನರಿಗೆ ಅನುಕೂಲದ ಬದಲು ಸಮಸ್ಯೆಗಳೇ ಹೆಚ್ಚಾಗುತ್ತದೆ ಎಂದು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಶಾಂತ್ ತಿಳಿಸಿದ್ದಾರೆ.
ಆದ್ದರಿಂದ ಯಥಾಸ್ಥಿತಿ ಕಾಪಾಡುವಂತೆ ಕೆಎಸ್‌ಆರ್‌ಟಿಸಿ ಸಬರ್ಬನ್ ಬಸ್ ನಿಲ್ದಾಣ ಉಳಿಸಿಕೊಳ್ಳಬೇಕು. ಬಸ್ ನಿಲ್ದಾಣ ಸ್ಥಳಾಂತರದಿಂದ ಸುತ್ತಮುತ್ತಲಿರುವ ಹೋಟೆಲ್ ಉದ್ದಿಮೆ, ವರ್ತಕರು, ಪ್ರಮುಖವಾಗಿ ಪ್ರವಾಸಿಗಳು ಹಾಗೂ ನಗರದ ಜನತೆಗೆ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಈ ನಿರ್ಧಾರ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿನಂತಿ ಮಾಡಿದ್ದೇವೆ.