ರಾಯಚೂರು
ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಜರುಗಿದೆ.
ಮೃತ ನಾಲ್ವರು ಮಧ್ಯಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಅವರ ಹೆಸರು, ವಿಳಾಸ ತಿಳಿದು ಬಂದಿಲ್ಲ.
ರಸ್ತೆ ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಆಗಿದ್ದು.
ಎರಡು ಜೆಸಿಬಿಯಿಂದ ಅಪಘಾತವಾದ ವಾಹನಗಳನ್ನು ತೆರವುಗೊಳಿಸಲಾಯಿತು.
ಮೃತದೇಹಗಳನ್ನು ಸಿಂಧನೂರು ಆಸ್ಪತ್ರೆಗೆ ರವಾನೆಮಾಎಲಾಗಿದ್ದು,
ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.